ವಿಜಯಪುರ : ನಗರಾಭಿವೃದ್ಧಿ ಸಚಿವರಾದ
ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು,ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು, ವಿಜಯಪುರಕ್ಕೆ
ಆಗಮಿಸುವ ಅವರು,ಬೆಳಿಗ್ಗೆ 10:30ಕ್ಕೆ ಮಹಾನಗರ ಪಾಲಿಕೆಯ ಸಭಾ ಭವನದಲ್ಲಿ ಮಹಾನಗರ ಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 12 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ,
12:30ಕ್ಕೆ ವಿಜಯಪುರದಿಂದ ಹೊರಟು ಮಧ್ಯಾಹ್ನ 1 ಗಂಟೆಗೆ ಬಿಜ್ಜರಗಿ ಗ್ರಾಮದ ಶ್ರೀ ವೀರಮುತ್ತೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಹಂಜಗಿ ಸಿದ್ದೇಶ್ವರ ಹಾಗೂ ಶ್ರೀ ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಲಶಾರೋಹಣ,ಕನಕದಾಸ ವೃತ್ತ ಉದ್ಘಾಟನೆ ಸಮಾರಂಭ ಹಾಗೂ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವರು.
ಮಧ್ಯಾಹ್ನ 3ಕ್ಕೆ ಬಿಜ್ಜರಗಿಯಿಂದ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Santhoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್


0 ಕಾಮೆಂಟ್‌ಗಳು