ಪಿಒಪಿ ಗಣೇಶ ಮೂರ್ತಿ ನಿಷೇಧ । ನಿಯಮ ಉಲ್ಲಂಘಿಸಿದವರಿಗೆ ಕಠಿಣ ಶಿಕ್ಷೆ: ಸುತ್ತೋಲೆ


ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಪ್ಲಾಸ್ಟ‌ರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ಮೂರ್ತಿಗಳ ಉತ್ಪಾದನೆ, ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯನ್ನು ನಿಷೇಧಿಸಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ (ಎಫ್ ಇಸಿಸಿ) ವಿಭಾಗದ ವಿಶೇಷ ಆಯುಕ್ತ ಸುಷ್ಮಾ ಗೋಡಬೋಲೆ ಅವರು ಸುತ್ತೋಲೆ ಹೊರಡಿಸಿದ್ದಾರೆ.


2026ನೇ ಸಾಲಿನ ಗಣೇಶ ಚತುರ್ಥಿ ಸಂದರ್ಭದಲ್ಲಿ ಈ ನಿಯಮಗಳನ್ನು ಉಲ್ಲಂಘಿಸಿದರೆ, ಕೇಂದ್ರ ಸರ್ಕಾರದ ಪರಿಸರ ಸಂರಕ್ಷಣಾ ಕಾಯ್ದೆ 1986ರ ಉಲ್ಲಂಘನೆ ದಂಡನೀಯ ಅಪರಾಧವಾಗಿದೆ ಎಂದು ತಿಳಿಸಿದ್ದಾರೆ.
ನೀರಿನ ಯಾವುದೇ ಮೂಲಗಳು ಮಾಲಿನ್ಯಗೊಳಗಾದಂತೆ ರಕ್ಷಿಸುವ ಉದ್ದೇಶದಿಂದ ಭಾರ ಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃ ತಗೊಂಡಂತಹ ಪ್ಲಾಸ್ಟರ್

ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ನೀರಿನ ಮೂಲಗಳಲ್ಲಿ ವಿಸರ್ಜನೆ ಮಾಡುವುದನ್ನು ರಾಜ್ಯದಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಪರಿಸರ ಸಂರಕ್ಷಣಾ ಕಾಯ್ದೆ 1986, ಸೆಕ್ಷನ್ (5) ರಡಿಯಲ್ಲಿ ಕೇಂದ್ರ ಸರ್ಕಾರದಿಂದ ಪ್ರತ್ಯಾಯೋಜಿಸಿರುವ ಅಧಿಕಾರದಡಿ ಸರ್ಕಾರವು 15ನೇ ಸೆಪ್ಟೆಂಬರ್ 2023ರಲ್ಲಿ ಆದೇಶ ಹೊರಡಿಸಿದೆ. ಇದು ನಗರ ಸ್ಥಳೀಯ ಸಂಸ್ಥೆಗಳಿಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.


'ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರು ಸಹ ಈ ಕುರಿತು ಮನವಿ ಮಾಡಿದ್ದು, ಪರಿಸರಕ್ಕೆ ಹಾಗೂ ಮುಖ್ಯವಾಗಿ ಜಲಮೂಲಗಳಿಗೆ ಹಾನಿಯನ್ನು ತಡೆಗಟ್ಟಲು ಪಿಒಪಿಯಿಂದ ಮೂರ್ತಿಗಳನ್ನು ತಯಾರಿಸದಂತೆ ಹಾಗೂ ಮಾರಾಟ ಮಾಡದಂತೆ ಕ್ರಮಕೈಗೊಳ್ಳುವಂತೆ ಕೋರಿಕೆ ಸಲ್ಲಿಸಿ ಪರಿಸರ ಹಾನಿ ಕುರಿತು ಕಳ ಕಳಿ ವ್ಯಕ್ತಪಡಿಸಿರುತ್ತಾರೆ' ಎಂದು ಅವರು ಉಲ್ಲೇಖಿಸಿದ್ದಾರೆ.










Santhoshvani Digital Daily News portal

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್ 

0 ಕಾಮೆಂಟ್‌ಗಳು