ದಾವಣಗೆರೆ/ನವದೆಹಲಿ:ದೇಶದ ಹೆಚ್ಚುತ್ತಿರುವ ಇಂಧನ ಬೇಡಿಕೆಯನ್ನು ಪೂರೈಸಲು ಹಾಗೂ ಸ್ವಚ್ಛ ಇಂಧನ ಪರಿವರ್ತನೆಗೆ ಉತ್ತೇಜನ ನೀಡಲು ಪರಮಾಣು ವಿದ್ಯುತ್ ಉತ್ಪಾದನಾ ಸಾಮರ್ಥವನ್ನು ಹಂತ ಹಂತವಾಗಿ ವಿಸ್ತರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ಅಣುಶಕ್ತಿ ಕಾರ್ಯಕ್ರಮದಡಿ ಪರಮಾಣು ವಿದ್ಯುತ್ ಉತ್ಪಾದನೆ ಕುರಿತು ಕೇಳಿದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿದೆ. ಕರ್ನಾಟಕ ಸೇರಿದಂತೆ ದೇಶದಲ್ಲಿ ಪರಮಾಣು ವಿದ್ಯುತ್ ಉತ್ಪಾದನೆ ವಿಸ್ತರಣೆಗೆ ಕೈಗೊಂಡ ಕ್ರಮಗಳು, ಪ್ರಸ್ತುತ ಸ್ಥಾಪಿತ ಸಾಮರ್ಥ್ಯ, ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಪರಮಾಣು ಶಕ್ತಿಯ ಪಾಲು, ನಿರ್ಮಾಣ ಮತ್ತು ಪ್ರಸ್ತಾವಿತ ಹಂತದಲ್ಲಿರುವ ಯೋಜನೆಗಳು, ಸುರಕ್ಷತಾ ಕ್ರಮಗಳು ಹಾಗೂ ಭವಿಷ್ಯದ ಮಾರ್ಗಸೂಚಿ ಕುರಿತು ಡಾ. ಪ್ರಭಾ ಮಲ್ಲಿಕಾರ್ಜುನ್ ಮಾಹಿತಿ ಕೇಳಿದ್ದರು.ದೇಶದಲ್ಲಿ ಪ್ರಸ್ತುತ 24 ಪರಮಾಣು ವಿದ್ಯುತ್ ಸ್ಥಾವರಗಳಿದ್ದು, ಒಟ್ಟು 8,780 ಮೆಗಾವ್ಯಾಟ್ ಸ್ಥಾಪಿತ ಸಾಮರ್ಥ್ಯ ಹೊಂದಿವೆ. 2025-26ರಲ್ಲಿ ದೇಶದ ಒಟ್ಟು ವಿದ್ಯುತ್ ಉತ್ಪಾದನೆಯಲ್ಲಿ ಪರಮಾಣು ಶಕ್ತಿಯ ಪಾಲು ಶೇಕಡಾ 3.1ರಷ್ಟಿತ್ತು ಎಂದು ಸರ್ಕಾರ ತಿಳಿಸಿದೆ. ಕರ್ನಾಟಕದ ಕೈಗಾ ಪರಮಾಣು ವಿದ್ಯುತ್ ಸ್ಥಾವರದ 1ರಿಂದ 4ನೇ ಘಟಕಗಳು ತಲಾ 220 ಮೆಗಾವ್ಯಾಟ್ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುತ್ತಿವೆ. ತಲಾ 700 ಮೆಗಾವ್ಯಾಟ್ ಸಾಮರ್ಥ್ಯದ ಕೈಗಾರಿಕಾ 5 ಮತ್ತು 6ನೇ ಘಟಕಗಳು ನಿರ್ಮಾಣ ಹಂತದಲ್ಲಿವೆ ಎಂದು ಉತ್ತರದಲ್ಲಿ ತಿಳಿಸಲಾಗಿದೆ.
SANTOSHVANI DIGITAL DAILY NEWS PORTAL
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್



0 ಕಾಮೆಂಟ್‌ಗಳು