ರಾಜ್ಯ ಮಹಿಳಾ ನಿಲಯಗಳ ವ್ಯವಸ್ಥೆಯಲ್ಲಿ ಮಹತ್ವದ ಸುಧಾರಣೆ ಡಾ. ನಾಗಲಕ್ಷ್ಮಿ ಚೌಧರಿ

ಬೆಂಗಳೂರು:ರಾಜ್ಯದ ಮಹಿಳಾ ನಿಲಯಗಳು ಮತ್ತು ಸ್ವೀಕಾರ ಕೇಂದ್ರಗಳಲ್ಲಿ ಮೂಲಸೌಲಭ್ಯಗಳನ್ನು ಕಲ್ಪಿಸಲು ಹಾಗೂ ನಿವಾಸಿಗಳ ಸುರಕ್ಷತೆ ಮತ್ತು ಆರೋಗ್ಯ ಕಾಪಾಡಲು ರಾಜ್ಯ ಮಹಿಳಾ ಆಯೋಗ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾವೇ ಸ್ವತಃ ರಾಜ್ಯ ಮಹಿಳಾ ನಿಲಯ-ಕ್ಕೆ ಮೂರನೇ ಬಾರಿ ಭೇಟಿ ನೀಡಿ ಅಲ್ಲಿನ ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿದ್ದೇನೆ. ಹಿಂದಿನ ಭೇಟಿಗಳ ಸಂದರ್ಭದಲ್ಲಿ ನಿಲಯದಲ್ಲಿ ಕುಡಿಯುವ ನೀರು, ಬಿಸಿ ನೀರು ಮತ್ತು ಟೆಲಿವಿಷನ್ ಸೌಲಭ್ಯದ ಕೊರತೆ ಹಾಗೂ ಸಿಬ್ಬಂದಿಯಿಂದ ಕಿರುಕುಳದ ದೂರುಗಳು ಕೇಳಿಬಂದಿದ್ದವು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿತ್ತು. ಇದೀಗ ಮತ್ತೊಮ್ಮೆ ಪರಿಶೀಲನೆ ನಡೆಸಿದಾಗ ನಿಲಯದ ವ್ಯವಸ್ಥೆಯಲ್ಲಿ ಸ್ಪಷ್ಟ ಸುಧಾರಣೆ ಕಂಡುಬಂದಿರುವುದು ಸಂತೋಷದ ಸಂಗತಿ ಎಂದರು.


ಪ್ರಸ್ತುತ ಈ ಕೇಂದ್ರದಲ್ಲಿ ಒಟ್ಟು 39 ಮಂದಿ ನಿವಾಸಿಗಳಿದ್ದು, ಇವರಲ್ಲಿ 31 ಮಂದಿ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ನಿವಾಸಿಗಳ ಆರೋಗ್ಯ ಮತ್ತು ಪೌಷ್ಟಿಕಾಂಶದ ಕಡೆಗೆ ವಿಶೇಷ ಗಮನಹರಿಸುವಂತೆ ಸೂಚಿಸಲಾಗಿದೆ. ಜುಲೈ ನಿಂದ ನಿವಾಸಿಗಳಿಗೆ ವಾರಕ್ಕೊಮ್ಮೆ ಮಾಂಸಾಹಾರ ನೀಡಲಾಗುತ್ತಿದೆ. ಅಪೌಷ್ಟಿಕತೆ ಮತ್ತು ರಕ್ತಹೀನತೆ ತಡೆಗಟ್ಟಲು ಪ್ರತಿದಿನ ಮೊಟ್ಟೆ ಹಾಗೂ ಕಬ್ಬಿಣಾಂಶದ ಪೂರಕ ಮಾತ್ರೆಗಳನ್ನು ನೀಡಲು ಸೂಚಿಸಲಾಗಿದೆ ಎಂದರು.














Santhoshvani Digital Daily News portal
 ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್ 

0 ಕಾಮೆಂಟ್‌ಗಳು