ಗುಟ್ಕಾ ಪಾನ್ ಮಸಾಲ ಮೇಲಿನ ಒಂದು ವರ್ಷದ ನಿಷೇಧ ಆದೇಶ ಹಿಂಪಡೆದ ಸಿಎಂ

 ಬೆಂಗಳೂರು: ತಂಬಾಕು ಅಥವಾ ನಿಕೋಟಿನ್ ಒಳಗೊಂಡಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರ ಹೇರಿದ್ದ ಒಂದು ವರ್ಷದ ನಿಷೇಧವನ್ನು ಹಿಂಪಡೆಯಲು ನಿರ್ಧರಿಸಿದೆ. ನಿಷೇಧ ಜಾರಿಗೆ ಬಂದ ಕೇವಲ ಎರಡು ದಿನಗಳಲ್ಲೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ನಿಷೇಧ ಆದೇಶವನ್ನು ಹಿಂಪಡೆಯುವಂತೆ ಸೂಚಿಸಿದ್ದಾರೆ.
ರಾಜ್ಯಾದ್ಯಂತ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟಕ್ಕೆ ಆಹಾರ ಸುರಕ್ಷತಾ ಆಯುಕ್ತರು ಒಂದು ವರ್ಷದ ನಿಷೇಧ ವಿಧಿಸಿದ್ದರು.

ತಮ್ಮ ಗಮನಕ್ಕೆ ತಾರದೆ ಈ ಆದೇಶ ಹೊರಡಿಸಿರುವುದಕ್ಕೆ ಡಿಕೆ ಶಿವಕುಮಾರ್‌ ಅಸಮಾಧಾನಗೊಂಡಿದ್ದರು. ಈ ನಿಷೇಧದಿಂದ ಹಲವು ರೈತರಿಗೆ ನಷ್ಟ ಉಂಟಾಗಬಹುದು ಎಂಬ ಕಾರಣ ನೀಡಿ, ಆದೇಶವನ್ನು ತಕ್ಷಣವೇ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Santhoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್ 

0 ಕಾಮೆಂಟ್‌ಗಳು