ಬೆಳಗಾವಿ:ಸಾಕಷ್ಟು ಪೈಪೋಟಿ ಮಧ್ಯೆಯೂ, ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಯಶಸ್ವಿಯಾಗಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ ಸಚಿವರಾಗಿದ್ದರು. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ದಕ್ಕಿತ್ತು.
ಸಂಪುಟ ವಿಸ್ತರಣೆ ವೇಳೆ ಮಂತ್ರಿ ಸ್ಥಾನ ಪಡೆಯಲು ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ, ಅಶೋಕ ಪಟ್ಟಣ, ಲಕ್ಷ್ಮಣಿ ಸವದಿ, ಮಹಾಂತೇಶ ಕೌಜಲಗಿ ಮತ್ತಿತರರು ಪ್ರಯತ್ನ ನಡೆಸಿದ್ದರು.
ಈ ಪೈಪೋಟಿಯಲ್ಲಿ ಪ್ರಭಾವಿ ನಾಯಕರ ಎಲ್ಲಾ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ, ಮಂತ್ರಿ ಸ್ಥಾನ ಪಡೆಯುವಲ್ಲಿ ಸವದಿ ಸಫಲವಾಗಿದ್ದಾರೆ.ನಾಲ್ಕನೇ ಸಲ ಶಾಸಕ: 2004, 2008, 2013 ಹಾಗೂ 2023ರ ವಿಧಾನಸಭೆ ಚುನಾವಣೆಗಳಲ್ಲಿ ಅಥಣಿ ಕ್ಷೇತ್ರದಿಂದ ಸವದಿ ಗೆದ್ದಿದ್ದಾರೆ.
ಒಂದು ಬಾರಿ ವಿಧಾನ ಪರಿಷತ್ ಸದಸ್ಯರಿದ್ದಾಗ, ಉಪಮುಖ್ಯಮಂತ್ರಿ ಆಗಿದ್ದರು. ಸಹಕಾರ, ಕೃಷಿ ಹಾಗೂ ಸಾರಿಗೆ ಸಚಿವರಾಗಿ ಕೆಲಸ ಮಾಡಿದ ಅನುಭವವಿದೆ.
Santoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್


0 ಕಾಮೆಂಟ್‌ಗಳು