ಬೆಳಗಾವಿ:ಶಿವಂ ಅಸೋಸಿಯೇಟ್ ಕಂಪನಿ ಮಾಲೀಕ ಶಿವಾನಂದ ನೀಲಣ್ಣವರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಇಡಿ ಅಧಿಕಾರಿಗಳ ಶೋಧ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ.
ಬೆಳಗಾವಿಯ ಶಿವಬಸವ ನಗರದಲ್ಲಿರುವ ಎಂ.ಎಚ್. ಟವರ್ನಲ್ಲಿ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಸಿಆರ್‌ಪಿಎಫ್ ತುಕಡಿಯ ಬಿಗಿ ಭದ್ರತೆಯೊಂದಿಗೆ ಇಡಿ ಅಧಿಕಾರಿಗಳು ಶೋಧ ಕಾರ್ಯ ಮುಂದುವರಿಸಿದ್ದಾರೆ.
ಗೋವಾ ಹಾಗೂ ಮಂಗಳೂರು ಮೂಲದ ಇಡಿ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ನಿನ್ನೆಯಿಂದಲೇ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಕೊಂಡಿರುವ ಇಡಿ, ಎಫ್‌ಐಆರ್ ದಾಖಲಾದ ಬಳಿಕ ಶಿವಾನಂದ ನೀಲಣ್ಣವರ್ ಅವರ ಮನೆ ಹಾಗೂ ಸಂಬಂಧಿತ ಸ್ಥಳಗಳ ಮೇಲೆ ದಾಳಿ ನಡೆಸಿದೆ.
ನಿನ್ನೆಯಿಂದಲೇ ಶಿವಾನಂದ ನೀಲಣ್ಣವರ್ ಅವರನ್ನು ಇಡಿ ಅಧಿಕಾರಿಗಳು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದು, ದಾಖಲೆಗಳ ಪರಿಶೀಲನೆಯ ಜೊತೆಗೆ ಹಣಕಾಸು ವ್ಯವಹಾರಗಳು, ಹೂಡಿಕೆಗಳು ಹಾಗೂ ಇತರ ವಹಿವಾಟುಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ.
ಇದೇ ವೇಳೆ ಶಿವಾನಂದ ನೀಲಣ್ಣವರ್ ಅವರ ಪತ್ನಿ ಹಾಗೂ ಸಹೋದರನನ್ನೂ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ವಿವಿಧ ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.
ಎರಡನೇ ದಿನವೂ ಶೋಧ ಕಾರ್ಯಾಚರಣೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮತ್ತಷ್ಟು ಚುರುಕುಗೊಂಡಿದ್ದು, ಇಡಿ ಅಧಿಕಾರಿಗಳ ಪರಿಶೀಲನೆ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.
ಜಿಲ್ಲಾ -
Santoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್



0 ಕಾಮೆಂಟ್‌ಗಳು