![]() |
ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕ ತಾಲೂಕಿನ ಪ್ರಸಿದ್ಧ ಗೋಡಚಿನಮಲ್ಕಿ ಜಲಪಾತಕ್ಕೆ ಭೇಟಿ ನೀಡಿ ಜಲಪಾತದ ರುದ್ರರಮಣೀಯ ಸೌಂದರ್ಯವನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳೊಂದಿಗೆ ಸಂವಾದ ನಡೆಸಿದ ಸಚಿವರು, ಪ್ರವಾಸೋದ್ಯಮ ಅಭಿವೃದ್ಧಿ, ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯಗಳ ಕಲ್ಪನೆ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರವಾಸಿಗರನ್ನು ಭೇಟಿ ಮಾಡಿ ಅವರ ಅನುಭವಗಳು ಹಾಗೂ ಅಭಿಪ್ರಾಯಗಳನ್ನು ಆಲಿಸಿದರು.ದೃಶ್ಯ ಸವಿಯಲು ಪ್ರವಾಸಿಗರ ದಂಡು: ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗೋಡಚಿನಮಲ್ಕಿ ಜಲಪಾತ ಭರ್ತಿಯಾಗಿ ಹರಿಯುತ್ತಿದ್ದು, ಅದರ ಮನಮೋಹಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಕಪ್ಪು ಬಂಡೆಗಳ ನಡುವೆ ಧುಮ್ಮಿಕ್ಕಿ ಹರಿಯುವ ಜಲಪಾತ ತನ್ನ ವಿಶಾಲತೆ ಹಾಗೂ ನೈಸರ್ಗಿಕ ಸೌಂದರ್ಯದಿಂದ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಇಂದು ಭಾನುವಾರ ರಜೆ ಹಿನ್ನೆಲೆಯಲ್ಲಿ ನಿನ್ನೆ ಜಲಪಾತಕ್ಕೆ ಪ್ರವಾಸಿಗರ ದಂಡೇ ಹರಿದು ಬಂದಿದ್ದು, ಯುವಕ-ಯುವತಿಯರು ಸೆಲ್ಫಿ, ಫೋಟೋ ಹಾಗೂ ರೀಲ್ಸ್‌ಗಳನ್ನು ಮಾಡಿ ಸಂಭ್ರಮಿಸಿದರು.
ಸಚಿವರ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಪ್ರವಾಸಿಗರು: ಜಲಪಾತ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರು ಅಲ್ಲಿಯೇ ಇದ್ದ ಸಚಿವ ಸತೀಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಸಂತಸ ವ್ಯಕ್ತಪಡಿಸಿದರು. ಅನೇಕರು ಸಚಿವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಅವರ ಸರಳತೆ ಮತ್ತು ಆತ್ಮೀಯತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು
ಜಿಲ್ಲಾ -
Santoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್


0 ಕಾಮೆಂಟ್‌ಗಳು