ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡ ಚಿತ್ರರಂಗದ ಹಾಸ್ಯ ನಟ ಚಿಕ್ಕಣ್ಣ


(Santhoshvani .com)

ಬೆಂಗಳೂರು: ಕನ್ನಡ ಚಿತ್ರರಂಗದ ಹೆಸರಾಂತ ಹಾಸ್ಯ ನಟ ಚಿಕ್ಕಣ್ಣ ಮಂಡ್ಯ ಮೂಲದ ಪಾವನಾ ಅವರ ಜೊತೆ ಇಂದು ಸಪ್ತಪದಿ ತುಳಿದಿದ್ದಾರೆ. ಕುಟುಂಬಸ್ಥರು, ಆಪ್ತರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಪಾವನಾ ಅವರ ಕೊರಳಿಗೆ ಮಾಂಗಲ್ಯಧಾರಣೆ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

ಆರತಕ್ಷತೆಯಲ್ಲಿ ಮಿಂಚಿದ ಚಿಕ್ಕಣ್ಣ-ಪಾವನಾ ಮದುವೆಗೂ ಮುನ್ನ ನಿನ್ನೆ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಚಿಕ್ಕಣ್ಣ ಹಾಗೂ ಪಾವನಾ ನೀಲಿ ಬಣ್ಣದ ಡ್ರೆಸ್ ನಲ್ಲಿ ಮಿಂಚಿದ್ದು ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಸಮಾರಂಭದಲ್ಲಿ ಡಾಲಿ ಧನಂಜಯ್, ತಾರಾ ಅನುರಾಧ, ಶ್ರೀಮುರಳಿ, ರಂಗಾಯಣ ರಘು, ಮೇಘನಾ ಗಾಂವ್ಕರ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದರು. ಹೊಸ ಜೀವನ ಆರಂಭಿಸಿದ ನವದಂಪತಿಗೆ ಸಿನಿರಂಗ ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.ದಾಂಪತ್ಯ ಜೀವನ ಸುಖವಾಗಿ ಸಾಗಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.








Santhoshovani digital Daily News Network

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು