(Santhoshvani.com)
ಹುಕ್ಕೇರಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿ.ಎಂ. ಕಿಸಾನ್) ಯೋಜನೆಯಡಿ ರೈತರು ಮುಂದಿನ ಕಂತಿನ ಹಣ ಪಡೆಯಲು ಇ-ಕೈವೆಸಿ (e-KYC) ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ ಎಂದು ಹುಕ್ಕೇರಿ ಕೃಷಿ ಸಹಾಯಕ ನಿರ್ದೇಶಕ ಮಹಾದೇವ ಪಟಗುಂದಿ ತಿಳಿಸಿದ್ದಾರೆ.
ಮುಂದಿನ ಸೆಪ್ಟೆಂಬರ್ ತಿಂಗಳಲ್ಲಿ ಪಿ.ಎಂ. ಕಿಸಾನ್ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಯಾಗಲಿದೆ. ಈ ಹಿನ್ನೆಲೆಯಲ್ಲಿ ಅರ್ಹ ರೈತರು ಕಡ್ಡಾಯವಾಗಿ ಬಯೋಮೆಟ್ರಿಕ್ ಅಥವಾ ಫೇಸ್ ಆಧಾರಿತ (Face Authentication) ಇ-ಕೈವೆಸಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಇ-ಕೈವೆಸಿ ಮಾಡಿಸದಿದ್ದರೆ ರೈತರ ಬ್ಯಾಂಕ್ ಖಾತೆಗೆ ಮುಂದಿನ ಕಂತಿನ ಹಣ ಜಮೆಯಾಗುವುದಿಲ್ಲ ಎಂದು ಎಚ್ಚರಿಸಲಾಗಿದೆ.
ಹೀಗಾಗಿ ಹುಕ್ಕೇರಿ ತಾಲ್ಲೂಕಿನ ಅರ್ಹ ರೈತರು ಕೂಡಲೇ ತಮ್ಮ ಇ-ಕೈವೆಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಕೃಷಿ ಇಲಾಖೆಯಿಂದ ಮನವಿ ಮಾಡಲಾಗಿದೆ.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು