(Santhoshvani.com)
ಬೆಳಗಾವಿ:ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳ ವ್ಯಾಪ್ತಿಯಲ್ಲಿ ಸೆ.15ರವರೆಗೆ ಜಾಬ್ ಕಾರ್ಡ ಮೇಳ ಹಮ್ಮಿಕೊಳ್ಳಲಾಗಿದ್ದು ಅರ್ಹ ಕೂಲಿಕಾರರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಾ.ಪಂ.ಇಒ ಪ್ರವೀಣ ಕಟ್ಟಿ ತಿಳಿಸಿದ್ದಾರೆ.
ತಾಲೂಕಿನಲ್ಲಿ ಜಾಬ್ ಕಾರ್ಡ್ ಮೇಳ ಕುರಿತು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಮತ್ತು ಆಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ ಜಾಬ್ ಕಾರ್ಡಗಳ ಮೇಳ ಆಯೋಜಿಸಲಾಗಿದೆ. ಈ ಮೇಳದ ಮೂಲಕ ಗ್ರಾಮೀಣ ಭಾಗದ ಅರ್ಹ ಕೂಲಿಕಾರರಿಗೆ ಜಾಬ್ ಕಾರ್ಡ ಒದಗಿಸಲಾಗುತ್ತಿದೆ. ಪ್ರತಿ ಗ್ರಾಮ ಪಂಚಾಯಿತಿಂದ 30 ರಿಂದ 50ರ ವರೆಗೆ ಹೊಸ ಜಾಬ್ ಕಾರ್ಡ ನೀಡಲು ಪಂಚಾಯಿತ ಸಿಬ್ಬಂದಿಗಳು ಕ್ರಮ ವಹಿಸಬೇಕು. ಸಕ್ರಿಯವಲ್ಲದ ಕೂಲಿಕಾರರನ್ನು ಸಕ್ರಿಯಗೊಳಿಸಲಾಗುತ್ತಿದೆ. ಅರ್ಹ ಕೂಲಿಕಾರರಿಗೆ ಹೊಸ ಜಾಬ್ ಕಾರ್ಡ ಸಹಿತ ವಿತರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಮೇಳದಲ್ಲಿ ಅರ್ಹಕೂಲಿಕಾರರು ಭಾಗವಹಿಸಬೇಕು. ಎಲ್ಲ ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಕೆಲಸ ನೀಡಲಾಗುತ್ತಿದೆ. 382 ರೂ. ಕೂಲಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಲಾಗುತ್ತಿದ್ದು, 125 ದಿನಗಳವರೆಗೆ ಕೆಲಸ ನೀಡಲಾಗುತ್ತಿದೆ. ಹಾಗಾಗಿ ಎಲ್ಲ ಕೂಲಿಕಾರರು ಉದ್ಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಗ್ರಾಮ ಪಂಚಾಯತಿಗೆ ಸಂಪರ್ಕಿಸುವಂತೆ ತಿಳಿಸಿದರು.
Santhoshovani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು