ಸಚಿವ ನಾಗೇಂದ್ರ ದೆಹಲಿಗೆ ದೌಡು


(Santhoshvani.com)

ನವದೆಹಲಿ:ಮಹತ್ವದ ಬೆಳವಣಿಗೆಯಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾತ್ರೋರಾತ್ರಿ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌ ಪ್ರಮುಖ ನಾಯಕರನ್ನು ಭೇಟಿಯಾಗಲಿದ್ದಾರೆ. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಸರಣಿ ಬೆಳವಣಿಗೆಗಳು, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ-ಕ್ಕೆ ಸಂಬಂಧಿಸಿದ ವಿವಾದಗಳು ಹಾಗೂ ವಿರೋಧ ಪಕ್ಷಗಳ ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಅವರ ದಿಢೀ‌ರ್ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಹಿರಿಯ ವರಿಷ್ಠರನ್ನು ಭೇಟಿ ಮಾಡಿ ತಮ್ಮ ಮೇಲಿನ ಆರೋಪಗಳು ಮತ್ತು ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಚರ್ಚೆ ನಡೆಸುವ ಸಾಧ್ಯತೆಯಿದೆ.












Santhoshvani digital Daily News Network

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು