ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದಲ್ಲಿ ಮಕ್ಕಳಿಗೆ ಸಮವಸ್ತ್ರ ಬ್ಯಾಗ್ ವಿತರಣೆ ಮಾಡಿದರು.

  (Santhoshvani.com)

ಹುಕ್ಕೇರಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ  ಯಮಕನಮರಡಿ ಮತಕ್ಷೇತ್ರದ ಸುಮಾರು 23 ಸಾವಿರ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಯೋಜನೆಯು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಮಹತ್ವದ ಹೆಜ್ಜೆಯಾಗಿದೆ ಎಂದು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಯಮಕನಮರಡಿ ಗ್ರಾಮದ ಸರ್ಕಾರಿ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯಲ್ಲಿ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ 1ರಿಂದ 5ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗೂ ಶಾಲಾ ಬ್ಯಾಗ್‌ಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಕ್ಕಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಮಕ್ಕಳಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಹೆಚ್ಚಿಸಲು ಹಾಗೂ ಶಾಲಾ ಹಾಜರಾತಿಗೆ ಉತ್ತೇಜನ ನೀಡಲು ಇಂತಹ ಯೋಜನೆಗಳು ಸಹಕಾರಿಯಾಗಲಿವೆ ಎಂದು ಅವರು ಹೇಳಿದರು.

ಈ ವೇಳೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಶಾಲಾ ಶಿಕ್ಷಕಿಯರು ಸನ್ಮಾನಿಸಿದರು.ಕಾರ್ಯಕ್ರಮದಲ್ಲಿ  ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾತೇಶ ಮಗದುಮ್ಮ, ಜಂಗಲಿಸಾಬ್ ನಾಯಿಕ, ಲಗಮಣ್ಣಾ ಪನಗುದ್ದಿ, ದಯಾನಂದ ಪಾಟೀಲ್, ಪ್ರಕಾಶ್ ಬಸ್ಸಾಪೂರೆ, ಮುಖಂಡರಾದ ಕಿರಣ್ ರಜಪೂತ, ಷರೀಫ್ ಬೇಪಾರಿ, ಗಿರೀಶ್ ಮಿಶ್ರಕೋಟೆ, ಈರಣ್ಣ ಬಿಸಿರೊಟ್ಟಿ, ರವಿ ಜಿಂಡ್ರಾಳೆ, ದೇವಪ್ಪ ಹುನ್ನೂರಿ, ದಸ್ತಗೀರ ಪಾಶ್ಚಾಪೂರೆ, ಬಿಇಒ ಪ್ರಭಾವತಿ ಪಾಟೀಲ ಸೇರಿದಂತೆ ಶಾಲೆಯ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಹಲವರು ಉಪಸ್ಥಿತರಿದ್ದರು.





Santhoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್ 

0 ಕಾಮೆಂಟ್‌ಗಳು