ರಾಜ್ಯಾದ್ಯಂತ ಸೆ.5ರಿಂದ 'ಪ್ರಜಾಸೇವಾ ಅಭಿಯಾನ' ಆರಂಭ: ಜನಸಾಮಾನ್ಯರ ಮನೆ ಬಾಗಿಲಿಗೆ ಆಡಳಿತ


(Santhoshvani.com)

ಬೆಂಗಳೂರು :ಕರ್ನಾಟಕ ರಾಜ್ಯ ಸರ್ಕಾರ ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ನೂತನವಾಗಿ ರೂಪಿಸಿರುವ ಮಹತ್ವಾಕಾಂಕ್ಷೆಯ ‘ಪ್ರಜಾಸೇವಾ ಅಭಿಯಾನ’ವು ಸೆಪ್ಟೆಂಬರ್ 5 ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.

ಜನರು ತಮ್ಮ ಸಣ್ಣಪುಟ್ಟ ಸಮಸ್ಯೆಗಳಿಗೂ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ಜನರ ಮನೆ ಬಾಗಿಲಿಗೆ ಆಡಳಿತ ಕೊಂಡೊಯ್ಯುವುದು ಹೊಸದಾಗಿ ರಚಿಸಲಾದ ‘ಪ್ರಜಾಸೇವಾ ಇಲಾಖೆ’ಯ ಪ್ರಮುಖ ಗುರಿಯಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರು ಈ ಹಿಂದೆ ಸರ್ಕಾರದ ಸೇವೆಗಳನ್ನು ಪಡೆಯಲು ಸಾಧ್ಯವಾಗದೇ ಇದ್ದಾಗ ಅಥವಾ ಯೋಜನೆಯ ಪ್ರಯೋಜನಗಳು ತಲುಪದೇ ಇದ್ದ ಸಂದರ್ಭದಲ್ಲಿ ಕುಂದುಕೊರತೆಯನ್ನು ಅಧಿಕಾರಿಗಳ ಜನಪ್ರತಿನಿಧಿಗಳ ಬಳಿ ಹೇಳಿಕೊಂಡು ಅದಕ್ಕೆ ಪರಿಹಾರ ಕಂಡುಕೊಳ್ಳುವುದಕ್ಕೆ ಹರ ಸಾಹಸ ಪಡಬೇಕಾದ ಪರಿಸ್ಥಿತಿ ಇತ್ತು. ಆದರೆ, ಈಗ ಹಾಗಿಲ್ಲ. ಕ್ಷಣಾರ್ಧದಲ್ಲಿ ಯಾವುದೇ ರೀತಿಯ ಕುಂದುಕೊರತೆಗಳನ್ನು ಸರ್ಕಾರದ ಬಳಿ ಹೇಳಿಕೊಳ್ಳಬಹುದು.

ಕರ್ನಾಟಕ ಸರ್ಕಾರದ ಪ್ರಜಾಸೇವಾ ಅಭಿಯಾನ ಎನ್ನುವುದು ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸ್ಥಳದಲ್ಲೇ ಅಥವಾ ನಿರ್ದಿಷ್ಟ ಅವಧಿಯಲ್ಲಿ ಪರಿಹಾರ ಒದಗಿಸುವ ಏಕೀಕೃತ ವ್ಯವಸ್ಥೆಯಾಗಲಿದೆ.






Santhoshvani digital Daily News Network

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು