ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಾಷಯ ಕೋರಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ


ಬೆಳಗಾವಿ: ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುತ್ತಾ, ಏಕತೆ, ಸಹೋದರತ್ವ ಹಾಗೂ ದೇಶಭಕ್ತಿಯೊಂದಿಗೆ ನವಭಾರತ ನಿರ್ಮಾಣದತ್ತ ಎಲ್ಲರೂ ಹೆಮ್ಮೆಯಿಂದ ಮುನ್ನಡೆಯೋಣ ಎಂದು ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ.



ಈ ಕುರಿತು ಮಾಹಿತಿ ನೀಡಿರುವ ಅವರು, 1947ರ ಆಗಸ್ಟ್ 15ರಂದು ನೂರಾರು ವರ್ಷಗಳ ಬ್ರಿಟಿಷ್ ದಾಸ್ಯದ ಸರಪಳಿಯನ್ನು ಕಳಚಿ, ಸ್ವತಂತ್ರ ಭಾರತವಾಗಿ ಹೊರಹೊಮ್ಮಿದ ನಮ್ಮ ದೇಶವಿಂದು 80ನೇ ವರ್ಷದ ಸ್ವಾತಂತ್ರ್ಯೋತ್ಸವದ ಸಂಭ್ರಮದಲ್ಲಿದೆ. ಹೀಗಾಗಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯವೀರರನ್ನು ಈ ಸಂದರ್ಭದಲ್ಲಿ ಸ್ಮರಿಸಿ, ಅವರ ತ್ಯಾಗ ಮತ್ತು ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದ ಅವರು, ನಾಡಿನ ಸಮಸ್ತ ಜನತೆಗೆ 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.













Santhoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್

0 ಕಾಮೆಂಟ್‌ಗಳು