(Santhoshovani.com)
ಬೆಳಗಾವಿ:2026-27ನೇ ಸಾಲಿನ ದಸರಾ ಕ್ರೀಡಾ ಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ತಾಲ್ಲೂಕು, ಜಿಲ್ಲಾ, ವಿಭಾಗ ಹಾಗೂ ರಾಜ್ಯ ಮಟ್ಟದಲ್ಲಿ ಏರ್ಪಡಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾ ಕೂಟಗಳನ್ನು ಸೆಪ್ಟೆಂಬರ ಎರಡನೇ ವಾರದೊಳಗಾಗಿ ಮತ್ತು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆಪ್ಟೆಂಬರ ಮೂರನೇ ವಾರದಲ್ಲಿ ಆಯೋಜಿಸಲಾಗುವುದು. ದಸರಾ ಕ್ರೀಡಾ ಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಈ Link htt-ps://dasaracmcup.in ಮೂಲಕ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ತಾಲ್ಲೂಕು ಮಟ್ಟದಲ್ಲಿ ಸಂಘಟಿಸುವ ಕ್ರೀಡೆಗಳು: ಅಥ್ಲೆಟಿಕ್, ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ, ಪ್ರೋಬಾಲ್, ಯೋಗಾಸನ.ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಕ್ರೀಡೆಗಳು: ಅಥ್ಲೆಟಿಕ್ಸ್, ವಾಲಿಬಾಲ್, ಫುಟಬಾಲ್, ಖೋಖೋ, ಕಬಡ್ಡಿ, ಬಾಸ್ಕೆಟಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡ್‌ಬಾಲ್, ಟೇಬಲ್ ಟೆನ್ನಿಸ್, ಥೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗಾಸನ 14 ಕ್ರೀಡೆಗಳಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗುವುದು ಮತ್ತು ಟೆನ್ನಿಸ್, ನೆಟಬಾಲ್, ಈಜು, ಟೇಕ್ವಾಂಡೋ, ಜುಡೋ, ವುಶು, ಕರಾಟೆ 7 ಕ್ರೀಡೆಗಳಿಗೆ ಆಯ್ಕೆಗಳನ್ನು ನಡೆಸಲಾಗುವುದು.
ದಸರಾ ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ. ಕ್ರೀಡಾಪಟುಗಳು ಪ್ರತಿನಿಧಿಸುವ ತಾಲ್ಲೂಕು ಜಿಲ್ಲೆಯ ಸ್ಥಳೀಯವಾದ ದೃಢೀಕರಣದ ಬಗ್ಗೆ ದಾಖಲೆಗಳನ್ನು ಸಲ್ಲಿಸುವುದು ಶಾಲಾ ಕಾಲೇಜಿನ ಗುರುತಿನ ಚೀಟಿ, ಆಧಾರ ಕಾರ್ಡ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ ಹಾಗೂ ಸರ್ಕಾರದಿಂದ ಅಧಿಕೃತ ಇರುವ ಇತರೆ ಗುರುತಿನ ಚೀಟಿಗಳು ಸದರಿ ಕ್ರೀಡಾಪಟುಗಳು ಬೇರೆ ಜಿಲ್ಲೆಯಿಂದ ಭಾಗವಹಿಸಿದ್ದಲ್ಲಿ ಅವರನ್ನು ನಿಷೇಧಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ಇವರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Santhoshovani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು