ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭಕೋರಿದ ಸಚಿವ ಸತೀಶ್ ಜಾರಕಿಹೊಳಿ

 

ಬೆಳಗಾವಿ: ನಾಡಿನ ಸಮಸ್ತ ಜನತೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು 80ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಶುಭ ಹಾರೈಸಿ ಮಾತನಾಡಿದ ಸಚಿವರು ಸ್ವಾತಂತ್ರ್ಯಕ್ಕಾಗಿ ಹೋರಾಡಿ, ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಿ ಗೌರವಿಸೋಣ. ಏಕತೆ, ಸಹೋದರತ್ವ ಹಾಗೂ ದೇಶಭಕ್ತಿಯ ಹಾದಿಯಲ್ಲಿ ಹೆಮ್ಮೆಯಿಂದ ಮುನ್ನಡೆಯೋಣ” ಎಂದು ಕರೆ ನೀಡಿದ್ದಾರೆ.


ದೇಶದ ಸ್ವಾತಂತ್ರ್ಯ, ಸಾರ್ವಭೌಮತೆ ಮತ್ತು ಸಂವಿಧಾನದ ಆಶಯಗಳನ್ನು ಎತ್ತಿಹಿಡಿದು, ಶಾಂತಿ, ಸೌಹಾರ್ದತೆ ಹಾಗೂ ಅಭಿವೃದ್ಧಿಯತ್ತ ಎಲ್ಲರೂ ಒಗ್ಗಟ್ಟಿನಿಂದ ಸಾಗೋಣ ಎಂದು ಸಚಿವರು ಆಶಯ ವ್ಯಕ್ತಪಡಿಸಿದ್ದಾರೆ.






















Santhoshvani Digital Daily News portal
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ಪೋರ್ಟಲ್ 

0 ಕಾಮೆಂಟ್‌ಗಳು