(santhoshvani.com)
ಕೊಪ್ಪಳ:ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಾಹಿಲ್ ಬಾಗ್ಲಾ ಅವರು ಭಾನುವಾರ ಅಧಿಕಾರ ಸ್ವೀಕರಿಸಿದರು.ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಡಾ. ರಾಮ್ ಎಲ್. ಅರಸಿದ್ದಿ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ ಸಾಹಿಲ್ ಬಾಗ್ಲಾ ಅವರನ್ನು ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ.
ಮೂಲತಃ ಪಂಜಾಬ್ ರಾಜ್ಯದವರಾದ ಸಾಹಿಲ್ ಬಾಗ್ಲಾ ಅವರು ಬಿ.ಟೆಕ್ ಪದವೀಧರರಾಗಿದ್ದು, ಕರ್ನಾಟಕ ಕೇಡರ್‌ನ 2018ನೇ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಬೆಂಗಳೂರು ನಗರದ ಪೂರ್ವ ಸಂಚಾರ ವಿಭಾಗದ ಡಿಸಿಪಿ, ಧಾರವಾಡ ಡಿಸಿಪಿ ಹಾಗೂ ಗುಪ್ತಚರ ವಿಭಾಗದ ಡಿಸಿಪಿಯಾಗಿ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಡಿಎಸ್ಪಿ ಮುತ್ತಣ್ಣ ಸರವಗೋಳ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
Santhoshovani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು