ಬೆಳಗಾವಿ ಜಿಲ್ಲಾಡಳಿತದ ಕಾರ್ಯವೈಖರಿ ಪರಿಶೀಲಿಸಿದ ಡಿಸಿಎಂ ಜಿ ಪರಮೇಶ್ವರ್ ಸಭೆಯಲ್ಲಿ ಪಾಲ್ಗೊಂಡ ಪ್ರಮುಖ ಗಣ್ಯರು!

(Santhoshvani.com)

ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ ಉಪಮುಖ್ಯಮಂತ್ರಿಗಳು ಹಾಗೂ ಹಿರಿಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಗೆ ದಿಢೀರ್ ಭೇಟಿ ನೀಡಿ ಜಿಲ್ಲೆಯ ಆಡಳಿತಾತ್ಮಕ ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ. ವಿವಿ ಕಾರ್ಯಕ್ರಮದ ನಡುವೆಯೂ ಜಿಲ್ಲಾಡಳಿತದ ಕಚೇರಿಗೆ ಭೇಟಿ ನೀಡಿರುವ ಅವರು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಸ್ಥಳೀಯ ಶಾಸಕರಾದ ಅಶೋಕ್ ಎಂ. ಪಟ್ಟಣ, ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಹಾಗೂ ಬೆಳಗಾವಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಹಲವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.









Santhoshvani digital Daily News Network

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು