https://youtube.com/shorts/Tl_TfERp7SI?si=EU1lvFHHhig4_J-2 YOUTUBE VIDEO -
(Santhoshvani.com)
ಬೆಳಗಾವಿ: ನಗರದ ಚವ್ಹಾಟಗಲ್ಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ ದಾರುಣ ಘಟನೆ ತಡರಾತ್ರಿ ನಡೆದಿದೆ. ಮನೆಯಲ್ಲಿ ಗೃಹಬಳಕೆಯ ಫ್ರಿಜ್ ಸ್ಫೋಟಗೊಂಡಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತಿಳಿದು ಬಂದಿದೆ.
ಫ್ರಿಜ್ ಸ್ಫೋಟದ ತೀವ್ರತೆಗೆ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಮನೆಗೆ ಆವರಿಸಿದೆ. ರಾತ್ರಿ ಗಾಢ ನಿದೆಯಲ್ಲಿದ್ದ ಕಾರಣ ಹಾಗೂ ಮನೆಯಿಂದ ಹೊರಬರಲು ದಾರಿ ಸಿಗದೆ ಕುಟುಂಬಸ್ಥರು ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತರ ವಿವರ:
ಘಟನೆಯಲ್ಲಿ ಗಜಾನನ ದಮೋನೆ (65), ರೋಷನ ದಮೋನೆ (21), ಶಾರಧಾ ದಮೋನೆ (45) ಹಾಗೂ ಭಾರತಿ ದಮೋನೆ (50) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಗಾಯಾಳುಗಳಿಗೆ ಚಿಕಿತ್ಸೆ:
ಈ ಭೀಕರ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಪ್ರಿಯಾ ದಮೋನೆ (28) ಹಾಗೂ ಗಂಗಾ ದಮೋನೆ (25) ಅವರನ್ನು ಕೂಡಲೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ.
ಹಬ್ಬದ ದಿನವೇ ವಕ್ಕರಿಸಿದ ದುಃಖ:
ದಿನಗೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡ ಕುಟುಂಬ ಇದಾಗಿದೆ. ಎಲ್ಲರೂ ಸೇರಿ ಸಡಗರದಿಂದ ಗಣೇಶ ಹಬ್ಬವನ್ನು ಆಚರಿಸಬೇಕಿದ್ದ ಪವಿತ್ರ ದಿನದಂದೇ ಈ ಕರಾಳ ದುರ್ಘಟನೆ ಸಂಭವಿಸಿರುವುದು ಇಡೀ ಪ್ರದೇಶದಲ್ಲಿ ಮರುಕ ಮೂಡಿಸಿದೆ ಹಾಗೂ ಕುಟುಂಬಸ್ಥರಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಮಾರ್ಕೆಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು