ಸಾರ್ವಜನಿಕರ ಅನುಕೂಲಕ್ಕಾಗಿ ಮಹಾನಗರ ಪಾಲಿಕೆ ವಿನೂತನ ಹೆಜ್ಜೆ:ಮನೆಗಳಲ್ಲೇ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳ ವಿಸರ್ಜನೆಗೆ ವಿಶೇಷ ಸಂಚಾರಿ ವಾಹನಗಳ ಸಂಚಾರ ಆರಂಭ.!

(Santhoshvani.com)

ಬೆಳಗಾವಿ: ಗಣೇಶ ಹಬ್ಬದ ಅದ್ದೂರಿ ಆಚರಣೆಯ ಹಿನ್ನೆಲೆಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸಿರುವ ಐದು ದಿನಗಳ ಗಣಪತಿ ಮೂರ್ತಿಗಳ ವಿಸರ್ಜನೆಗಾಗಿ ವಿಶೇಷ ಲಘು ಸಂಚಾರಿ ವಾಹನಗಳ ವ್ಯವಸ್ಥೆಯನ್ನು ಮಾಡಲಾಗಿದೆ.

​ಐದು ದಿನಗಳ ಗಣೇಶ ಮೂರ್ತಿಗಳ ವಿಸರ್ಜನಾ ದಿನವಾದ ಇಂದು, ಸಾರ್ವಜನಿಕರ ಅನುಕೂಲಕ್ಕಾಗಿ ಪಾಲಿಕೆಯಿಂದ 14, ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 10 ಹಾಗೂ ದಂಡು ಮಂಡಳಿಯಿಂದ 5 ಲಘು ವಾಹನಗಳು ಸೇರಿದಂತೆ ಒಟ್ಟು 29 ವಾಹನಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಗಳನ್ನು ಯಾವುದೇ ತೊಂದರೆಯಿಲ್ಲದೆ ವಿಸರ್ಜನಾ ಕೇಂದ್ರಗಳಿಗೆ ಕೊಂಡೊಯ್ಯಲು ಅನುಕೂಲವಾಗಿದೆ.

​ವಾಹನ ಸಂಚಾರಕ್ಕೆ ಚಾಲನೆ:

ನಗರದ ವಿವಿಧ ವಿಸರ್ಜಣಾ ಕೇಂದ್ರಗಳಿಗೆ ತೆರಳುವ ಈ ಲಘು ಸಂಚಾರಿ ವಾಹನಗಳ ಸೇವೆಗೆ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ (ಪ) ಹನಮಂತ ಕಲಾದಗಿ ಅವರು ಅಧಿಕೃತ ಚಾಲನೆ ನೀಡಿದರು. ಈ ವೇಳೆ ಆರೋಗ್ಯ ವಿಭಾಗದ ಸಿಬ್ಬಂದಿ ಪರಶುರಾಮ ಕಾಂಬ್ಳೆ ಕೂಡ ಉಪಸ್ಥಿತರಿದ್ದು, ಸಾರ್ವಜನಿಕರಿಗೆ ಅಗತ್ಯ ನೆರವು ಒದಗಿಸಿದರು.








Santhoshvani digital Daily News Network

 ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು