ನಿಪ್ಪಾಣಿ ತಹಶೀಲ್ದಾರ್ ಅಕ್ರಮ ಸಂಪಾದನೆಗೆ ಶಂಕೆ: ವಿವಿಧೆಡೆ ಇರುವ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ದಾಳಿ!


(Santhoshvani.com)

ಬೆಳಗಾವಿ: ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಿಢೀರ್ ದಾಳಿ ನಡೆಸಿ, ತೀವ್ರ ಪರಿಶೀಲನೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ನಿಪ್ಪಾಣಿ ತಹಶೀಲ್ದಾರ್ ಸುರೇಶ್ ಮುಂಜೆ ಅವರ ಮನೆ ಹಾಗೂ ಕಚೇರಿಗಳನ್ನು ಗುರಿಯಾಗಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಭ್ರಷ್ಟಾಚಾರದ ಆರೋಪ ಹಾಗೂ ಅಕ್ರಮವಾಗಿ ಆಸ್ತಿ ಸಂಪಾದಿಸಿರುವ ದೂರಿನ ಮೇರೆಗೆ ತಹಶೀಲ್ದಾರ್ ಸುರೇಶ್ ಮುಂಜೆ ಅವರಿಗೆ ಸಂಬಂಧಿಸಿದ ಪ್ರಮುಖ ಸ್ಥಳಗಳ ಮೇಲೆ ಲೋಕಾಯುಕ್ತ ಬಲೆ ಬೀಸಿದೆ. ನಿಪ್ಪಾಣಿ ಪಟ್ಟಣದಲ್ಲಿರುವ ಅವರ ಅಧಿಕೃತ ಹಾಗೂ ಖಾಸಗಿ ಮನೆ, ಅಥಣಿ ಪಟ್ಟಣದಲ್ಲಿರುವ ನಿವಾಸ ಹಾಗೂ ಮೂಡಲಗಿ ಪಟ್ಟಣದಲ್ಲಿರುವ ಅವರ ಮಾವನ ಮನೆಯ ಮೇಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ತಹಶೀಲ್ದಾರ್ ಸುರೇಶ್ ಅವರ ವಿರುದ್ಧ ಕೇಳಿಬಂದಿರುವ ಅಕ್ರಮ ಆಸ್ತಿಗಳಿಕೆ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧೆಡೆ ಇರುವ ಅವರ ಮನೆ ಹಾಗೂ ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ಪ್ರಸ್ತುತ ಅಧಿಕಾರಿಗಳು ಸ್ಥಳದಲ್ಲಿದ್ದು, ಆಸ್ತಿ-ಪಾಸ್ತಿ ಹಾಗೂ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.






0 ಕಾಮೆಂಟ್‌ಗಳು