(Santhoshvani.com)
ಬೆಂಗಳೂರು: ನಾಡಹಬ್ಬ ನವರಾತ್ರಿ ಸಂದರ್ಭದಲ್ಲೇ ರಾಜ್ಯದ 'ಗೃಹಲಕ್ಷ್ಮಿ' ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಕ್ಕಿದೆ. ಹಬ್ಬದ ಸಂಭ್ರಮದ ನಡುವೆಯೇ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮೆಯಾಗಲಿದೆ.
ಸದ್ಯ ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಪರಿಷ್ಕರಣೆಯ ಕಸರತ್ತಿನಲ್ಲಿ ತೊಡಗಿದೆ. ಈ ಪ್ರಕ್ರಿಯೆ ನಡೆಯುತ್ತಿದ್ದರೂ ಸಹ ಫಲಾನುಭವಿಗಳಿಗೆ ಹಣ ಪಾವತಿಯನ್ನು ತಡೆಯಬಾರದು ಎಂದು ಮುಖ್ಯಮಂತ್ರಿಗಳು ಸ್ಪಷ್ಟ ಸೂಚನೆ ನೀಡಿದ್ದರು. ಸಿಎಂ ಅವರ ನಿರ್ದೇಶನದ ಮೇರೆಗೆ ಆರ್ಥಿಕ ಇಲಾಖೆಯು 33ನೇ ಕಂತಿನ ಹಣ ಬಿಡುಗಡೆಗೆ ಅಧಿಕೃತವಾಗಿ ಹಸಿರು ನಿಶಾನೆ ತೋರಿದೆ. ಪರಿಷ್ಕರಣಾ ಕಾರ್ಯಗಳು ನಡೆಯುವ ಹಂತದಲ್ಲೂ ಹಣ ಪಾವತಿ ನಿಲ್ಲುವುದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗಿದೆ.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು