(Santhoshvani.com)
ಹುಕ್ಕೇರಿ: ಮಳೆಯಿಲ್ಲದೆ ಹಾಗೂ ತೀವ್ರ ಬರದ ಬಿಸಿಲಿಗೆ ತತ್ತರಿಸಿ ಹೋಗಿರುವ ಹುಕ್ಕೇರಿ ತಾಲೂಕನ್ನು ತಕ್ಷಣವೇ ಅಧಿಕೃತವಾಗಿ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಬೇಕು ಎಂದು ಎಂ.ಎಚ್.ಆರ್.ವಿ. ರಾಜ್ಯಾಧ್ಯಕ್ಷರು ಹಾಗೂ ಕರ್ನಾಟಕ ಸಮರ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷರಾದ ಸಂತೋಷ್ ಅವರು ರಾಜ್ಯ ಸರ್ಕಾರವನ್ನು ಬಲವಾಗಿ ಆಗ್ರಹಿಸಿದ್ದಾರೆ. ತಾಲೂಕಿನಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಅನ್ನದಾತರ ಬೆಳೆಗಳು ಸಂಪೂರ್ಣವಾಗಿ ಕಮರಿ ಹೋಗಿದ್ದು, ರೈತರು ಕಷ್ಟದ ಸುಳಿಗೆ ಸಿಲುಕಿದ್ದಾರೆ. ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಂಕಷ್ಟ ಎದುರಾಗಿದ್ದರೂ ಆಡಳಿತ ವ್ಯವಸ್ಥೆ ಮಾತ್ರ ಇನ್ನೂ ಮೌನ ವಹಿಸಿದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರೈತರ ಸಂಕಷ್ಟಕ್ಕೆ ಸ್ಪಂದಿಸಲು ವಿಳಂಬವೇಕೆ?:
ಬರ ಪರಿಸ್ಥಿತಿಯಿಂದಾಗಿ ರೈತರು ಮಾಡಿದ ಸಾಲ ತೀರಿಸಲಾಗದೆ ಹಾಗೂ ಬದುಕಿಗೆ ದಾರಿ ಕಾಣದೆ ಕಂಗಾಲಾಗಿದ್ದಾರೆ. ಕೂಡಲೇ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಹುಕ್ಕೇರಿ ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತ ಕುಟುಂಬಗಳಿಗೆ ತುರ್ತಾಗಿ ಪರಿಹಾರ ಹಾಗೂ ಆರ್ಥಿಕ ನೆರವು ಘೋಷಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇಲ್ಲದಿದ್ದರೆ ರೈತರ ಪರವಾಗಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಂ.ಎಚ್.ಆರ್.ವಿ. ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕ ಸಮರ ಸೇನೆ ಬೆಳಗಾವಿ ಜಿಲ್ಲಾಧ್ಯಕ್ಷ ಸಂತೋಷ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು