ಹಾಲಿನ ದರ ಹೆಚ್ಚಳಕ್ಕೆ ಸರ್ಕಾರದ ಒಲವು: ಒಕ್ಕೂಟಗಳ ಪ್ರಸ್ತಾವನೆಗೆ ಮನ್ನಣೆ ನೀಡಿದ ಸರ್ಕಾರ!

(Santhoshvani.com)

ಬೆಂಗಳೂರು: ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಸಾಮಾನ್ಯ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಆಘಾತ ನೀಡಲು ಮುಂದಾಗಿದ್ದು, ಹಾಲಿನ ದರವನ್ನು ಹೆಚ್ಚಿಸುವಂತೆ ವಿವಿಧ ಒಕ್ಕೂಟಗಳು ಸಲ್ಲಿಸಿದ್ದ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ. 

ಇತ್ತೀಚಿಗಷ್ಟೇ ಹಾಲು ಒಕ್ಕೂಟಗಳ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಂದಿನಿ ಹಾಲಿನ ಖರೀದಿ ಮತ್ತು ಮಾರಾಟ ದರವನ್ನು ಪ್ರತಿ ಲೀಟರ್‌ಗೆ 8 ರೂ.ಯಿಂದ 10 ರೂ.ನಷ್ಟು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡುವಂತೆ ಅಧಿಕೃತ ಮನವಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ರಾಜ್ಯದ 16 ಜಿಲ್ಲೆಗಳ ಹಾಲು ಸಹಕಾರ ಸಂಘಗಳ ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸರ್ಕಾರ, ಶೀಘ್ರದಲ್ಲೇ ಪ್ರತಿ ಲೀಟರ್ ಹಾಲಿನ ದರವನ್ನು 4 ರಿಂದ 5 ರೂ.ಗಳವರೆಗೆ ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.








Santhoshvani digital Daily News Network

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು