(Santhoshvani.com)
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ಮುಂದಿನ ಕೆಲ ಗಂಟೆಗಳಲ್ಲಿ ಒಟ್ಟು 19 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ವರದಿಯಾಗಿದೆ.
ಮುಂದಿನ ಕೆಲ ಗಂಟೆಗಳಲ್ಲಿ ಬಳ್ಳಾರಿ, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಪ್ಪಳ, ರಾಮನಗರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ ಹಾಗೂ ವಿಜಯನಗರ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಮಳೆಯಾಗಲಿದೆ.
ಮಳೆ ಹಾಗೂ ಬಿರುಗಾಳಿಯ ಅಬ್ಬರವಿರುವ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಸೂಚಿಸಲಾಗಿದೆ. ಮರಗಳ ಕೆಳಗೆ, ವಿದ್ಯುತ್ ಕಂಬಗಳ ಸಮೀಪ ಅಥವಾ ತೆರೆದ ಪ್ರದೇಶಗಳಲ್ಲಿ ನಿಲ್ಲದಿರಲು ಹಾಗೂ ಅನಗತ್ಯ ಪ್ರಯಾಣವನ್ನು ತಪ್ಪಿಸಲು ಸಲಹೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ಐ ಎಮ್ ಡಿ ಪ್ರಕಾರ, ಸೆಪ್ಟೆಂಬರ್ 29ರಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಮತ್ತು ಮಿಂಚಿನಾರ್ಭಟ ಇರಲಿದೆ.
ರಸ್ತೆಗಳಲ್ಲಿ ನೀರು ನಿಲ್ಲುವ ಸಂಭವವಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಚ್ಚರಿಕೆಯಿಂದ ಹಾಗೂ ನಿಧಾನವಾಗಿ ಸಂಚರಿಸಬೇಕು. ತಗ್ಗು ಪ್ರದೇಶಗಳು ಹಾಗೂ ಜಲಾವೃತಗೊಂಡ ರಸ್ತೆಗಳಲ್ಲಿ ಅನಗತ್ಯವಾಗಿ ಓಡಾಡುವುದನ್ನು ತಪ್ಪಿಸುವುದು ಮಾಡುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು