ಹೆಲಿಕಾಪ್ಟರ್ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದ ಸಚಿವ ಸತೀಶ್ ಜಾರಕಿಹೊಳಿ: ಇಂದು ಕೆಡಿಪಿ ಮಹತ್ವದ ಸಭೆ

(Santhoshvani.com)

ಬೆಳಗಾವಿ: ಸುವರ್ಣಸೌಧದಲ್ಲಿ ಇಂದು ಆಯೋಜಿಸಲಾಗಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕದಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿಗೆ ಆಗಮಿಸಿದರು.

​ಗೋಕಾಕದಿಂದ ಹೆಲಿಕ್ಯಾಪ್ಟರ್‌ನಲ್ಲಿ ಸುವರ್ಣಸೌಧದ ಹೆಲಿಪ್ಯಾಡ್‌ಗೆ ಬಂದಿಳಿದ ಸಚಿವರೊಂದಿಗೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹಾಗೂ ಸಚಿವರ ಆಪ್ತ ಸಹಾಯಕ ಬಸವರಾಜ ಜತ್ತಿ ಸಾಥ್ ನೀಡಿದರು. ಹೆಲಿಪ್ಯಾಡ್‌ನಲ್ಲಿ ಸಚಿವರಿಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಪ್ರಕಾಶ್ ನಿಕಂ, ಜಿಪಂ ಸಿಇಒ ರಾಹುಲ್ ಶಿಂಧೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕೆ. ಸೇರಿದಂತೆ ಹಿರಿಯ ಆಡಳಿತಾತ್ಮಕ ಅಧಿಕಾರಿಗಳು ಹೂಗುಚ್ಛ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಶಾಸಕ ಆಸಿಫ್ ಸೇಠ್, ವಿಶ್ವಾಸ ವೈದ್ಯ ಸೇರಿದಂತೆ ಹಲವು ಪ್ರಮುಖ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇಂದು ಸುವರ್ಣಸೌಧದಲ್ಲಿ ನಡೆಯಲಿರುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಸರ್ಕಾರದ ನಾನಾ ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಆಳವಾದ ಚರ್ಚೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗುತ್ತದೆ.









Santhoshvani digital Daily News Network

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು