ಮುಂದಿನ ರಾಜಕೀಯ ಸಮರಕ್ಕೆ ಭರ್ಜರಿ ರಣತಂತ್ರ ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಖಚಿತ ಎಂದ ಬಿಎಸ್‌ವೈ!

(Santhoshvani.com

ಕಲಬುರಗಿ: ರಾಜ್ಯದಲ್ಲಿ ಎದುರಾಗುವ ಮುಂಬರುವ ಎಲ್ಲಾ ಚುನಾವಣೆಗಳನ್ನೂ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾ ದಳ (ಜಾತ್ಯತೀತ) ಪಕ್ಷಗಳು ಒಟ್ಟಾಗಿ ಮೈತ್ರಿ ಮಾಡಿಕೊಂಡೇ ಎದುರಿಸಲಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

​ಕಲಬುರಗಿಯಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಉಭಯ ಪಕ್ಷಗಳ ನಡುವೆ ಮತ್ತೊಮ್ಮೆ ಗಟ್ಟಿಯಾದ ಮೈತ್ರಿ ಏರ್ಪಟ್ಟಿದ್ದು, ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಪಕ್ಷದ ವರಿಷ್ಠರು ಸ್ಪಷ್ಟ ತೀರ್ಮಾನ ಕೈಗೊಂಡಿದ್ದಾರೆ ಎಂದು ತಿಳಿಸಿದರು. ಮುಂಬರುವ ಎಲ್ಲಾ ಹಂತದ ಚುನಾವಣೆಗಳಲ್ಲೂ ಈ ಮೈತ್ರಿ ಮುಂದುವರಿಯಲಿದೆ ಎಂದರು.

​ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು:

ಇದೇ ವೇಳೆ, ಎರಡು 2028ರ ವಿಧಾನಸಭಾ ಚುನಾವಣೆಯಲ್ಲಿ ತಾವೇ ಮುಖ್ಯಮಂತ್ರಿ ಆಗಲಿದ್ದೇನೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಅಧಿಕಾರಕ್ಕೆ ಬರಲು ಹಣಬಲ, ತೋಳ್ಬಲ ಹಾಗೂ ಅಧಿಕಾರದ ಬಲವನ್ನು ದುರುಪಯೋಗಪಡಿಸಿಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಗಂಭೀರ ಆರೋಪ ಮಾಡಿದರು. ಅಂತಿಮವಾಗಿ ರಾಜ್ಯದ ಜನರೇ ಎಲ್ಲವನ್ನೂ ಗಮನಿಸುತ್ತಿದ್ದು, ತಕ್ಕ ಸಮಯದಲ್ಲಿ ಸೂಕ್ತ ತೀರ್ಪು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ಮೊದಲು ಚುನಾವಣೆಯನ್ನು ಒಗ್ಗಟ್ಟಿನಿಂದ ಎದುರಿಸುವುದು ಮಾತ್ರವೇ ಅತ್ಯಂತ ಮುಖ್ಯವಾದ ವಿಚಾರವಾಗಿದೆ ಎಂದು ತಿಳಿಸಿದರು. ಮೈತ್ರಿಕೂಟದ ನಾಯಕತ್ವ ಹಾಗೂ ಮುಂದಿನ ಧೋರಣೆಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಈಗಾಗಲೇ ಸ್ಪಷ್ಟಪಡಿಸಿರುವ ವಿಚಾರಗಳೇ ಅಂತಿಮವಾಗಿವೆ ಎಂದರು. ಒಟ್ಟಾರೆಯಾಗಿ ಎರಡೂ ಪಕ್ಷಗಳು ಕೈಜೋಡಿಸಿ ಚುನಾವಣೆಯನ್ನು ಎದುರಿಸುವುದೇ ಸದ್ಯದ ಪ್ರಮುಖ ನಿರ್ಧಾರವಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದರು.









Santhoshvani digital Daily News Network

ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್ 

0 ಕಾಮೆಂಟ್‌ಗಳು