(Santhoshvani.com)
ಬೆಳಗಾವಿ: ನಗರದ ಗಾಂಧೀನಗರದ ಬಳಿ ರಾಷ್ಟ್ರೀಯ ಹೆದಾರಿಯಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಮಹಾಂತೇಶ ನಗರದ ಧ್ರುವ ಸಂತೋಷ ಕರಜಗಿ (19) ಎಂಬ ಯುವಕ ಮಾಂಜಾ ದಾರಿಗೆ ಸಿಲುಕಿ ಮೃತಪಟ್ಟಿದ್ದಾನೆ.
ಧ್ರುವ ಅವರು ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಗಾಂಧೀನಗರದ ಬಳಿ ಹಠಾತ್ತನೆ ಮಾಂಜಾದ ಹರಿತವಾದ ದಾರ್ ಅವರ ಕುತ್ತಿಗೆಗೆ ಸಿಲುಕಿಕೊಂಡಿದೆ. ಈ ದಾರದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಗಾಳಿಪಟ ಹಾರಿಸುವ ಸಂಭ್ರಮವು ಈಗ ಸಾರ್ವಜನಿಕರ ಜೀವಕ್ಕೆ ಕುತ್ತು ತರುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
Santhoshvani digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್


0 ಕಾಮೆಂಟ್‌ಗಳು