(Santhoshvani.com)
ಸಂಕೇಶ್ವರ: ಬೆಳಗಾವಿಯಿಂದ ಕೊಲ್ಲಾಪುರ ಕಡೆಗೆ ತೆರಳುತ್ತಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ಚಾಲಕನ ಸ್ಥಿತಿ ಗಂಭೀರವಾಗಿದ್ದು,11 ಜನ ಪ್ರಯಾಣಿಕರು ಗಾಯಗೊಂಡಿರುವ ದಾರುಣ ಘಟನೆ ಜರುಗಿದೆ.
ಸಂಕೇಶ್ವರದಿಂದ ಕೊಲ್ಲಾಪುರ ಕಡೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ 48ರ ಹರಗಾಪೂರ ಹಾಗೂ ಹೊನ್ನಿಹಳ್ಳಿ ಹೆದ್ದಾರಿ ರಸ್ತೆ ಮಧ್ಯೆ ಅಪಘಾತ ಸಂಭವಿಸಿದೆ. ಸಂಜೆ ಸುಮಾರು 6:40ರ ನಂತರದ ಅವಧಿಯಲ್ಲಿ, ಹೆದ್ದಾರಿ ಮೇಲೆ ನಿಂತಿದ್ದ ಟಿಪ್ಪರ್‌ಗೆ ವೇಗವಾಗಿ ಬಂದ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿಲ್ಲ ನಜ್ಜುಗುಜ್ಜಾಗಿದ್ದು, ಅಪಘಾತಕ್ಕೆ ಕಾರಣ ಟಿಪ್ಪರ್ ನಿಂತಿದು ಲೈಟ್ ಬೆಳಕು ಸರಿಯಾಗಿ ಕಾಣಿಸಿಲ್ಲ ಎಂಬ ಮೂಲಗಳು ಪ್ರಕಾರ ಮಾಹಿತಿ ಗಂಭೀರವಾಗಿ ಗಾಯಗೊಂಡಿರುವ ಬಸ್ ಚಾಲಕ ಹಾಗೂ ಇತರೆ 11 ಜನ ಪ್ರಯಾಣಿಕರನ್ನು ತಕ್ಷಣವೇ ಚಿಕಿತ್ಸೆಗಾಗಿ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಸಂಕೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಈ ವಾಹನವು ಗಂಗಾವತಿ ಡಿಪೋಗೆ ಸೇರಿದ್ದು ಎಂದು ತಿಳಿದು ಬಂದಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Santoshvani Digital Daily News Network
ಸಂತೋಷವಾಣಿ ಡಿಜಿಟಲ್ ಡೈಲಿ ನ್ಯೂಸ್ ನೆಟ್ವರ್ಕ್



0 ಕಾಮೆಂಟ್‌ಗಳು